ಬೆಂಗಳೂರು : ಮಗಳ ಶವವನ್ನು ಸಾಗಿಸಲು ಲಂಚ ಕೇಳಿದ ಆರೋಪದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NCHR) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.
ಮಗಳ ಶವ ಸಾಗಿಸಲು ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ನೋಟಿಸ್ ನೀಡಿದೆ.
ಮಗಳ ಮೃತದೇಹ ಸಾಗಿಸಲು, ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಅಂತ್ಯಸಂಸ್ಕಾರಕ್ಕೆ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ನಿವೃತ್ತ ಅಧಿಕಾರಿ ಕೆ. ಶಿವಕುಮಾರ್ ಅವರು ತಮ್ಮ ಮಗಳ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಎದುರಿಸಿದ ಕಹಿ ಅನುಭವಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಗಂಭೀರವಾಗಿ ಪರಿಗಣಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
