HomeIndiaBIG NEWS: ನಿರ್ಮಾಣ ಹಂತದ ಸೇತುವೆ ಕುಸಿತ: ಐವರು ಸ್ಥಳದಲ್ಲೇ ದುರ್ಮರಣ

BIG NEWS: ನಿರ್ಮಾಣ ಹಂತದ ಸೇತುವೆ ಕುಸಿತ: ಐವರು ಸ್ಥಳದಲ್ಲೇ ದುರ್ಮರಣ

ಲಖನೌ: ಭಾರಿ ಬಿರುಗಾಳಿ ಮಳೆಯಿಂದಾಗಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಬೆಟ್ವಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿರ್ಮಾಣ ಕಾರ್ಯದ ಸಮಯದಲ್ಲಿ ಬಲವಾದ ಗಾಳಿ ಬೀಸಿದಾಗ ಸೇತುವೆಯ ಸ್ಲ್ಯಾಬ್ ಮತ್ತು ಪಿಯರ್, ಸ್ಕ್ಯಾಫೋಲ್ಡಿಂಗ್ ರಚನೆಯೊಂದಿಗೆ ಕುಸಿದು ಬಿದ್ದಿದೆ. ಕುರಾರ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದಲ್ಲಿರುವ ಕಂದೌರ್-ಮೊರಕಂದರ್ ಸೇತುವೆಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular