ಭೋಪಾಲ್: ನಗರದ ಐಶ್‌ಬಾಗ್ ಪ್ರದೇಶದಲ್ಲಿ ಹೊಸ ರೈಲು ಓವರ್ ಬ್ರಿಡ್ಜ್‌ನ 90 ಡಿಗ್ರಿ ತಿರುವು ಹೊಂದಿರುವ ದೋಷಪೂರಿತ ವಿನ್ಯಾಸಕ್ಕಾಗಿ ಲೋಕೋಪಯೋಗಿ ಇಲಾಖೆಯ ಇಬ್ಬರು ಮುಖ್ಯ ಎಂಜಿನಿಯರ್‌ಗಳು ಸೇರಿದಂತೆ 7 ಎಂಜಿನಿಯರ್‌ಗಳನ್ನು ಮಧ್ಯಪ್ರದೇಶ ಸರ್ಕಾರ ಶನಿವಾರ ಅಮಾನತುಗೊಳಿಸಿದೆ.
ಐಶ್ ಬಾಗ್ ಆರ್‌ಒಬಿ ನಿರ್ಮಾಣದಲ್ಲಿ ಗಂಭೀರ ನಿರ್ಲಕ್ಷ್ಯವನ್ನು ನಾನು ಗಮನಿಸಿದ್ದೇನೆ ಮತ್ತು ತನಿಖೆಗೆ ಆದೇಶಿಸಿದೆ. ವಿಚಾರಣಾ ವರದಿಯ ಆಧಾರದ ಮೇಲೆ, ಎಂಟು ಪಿಡಬ್ಲ್ಯೂಡಿ ಎಂಜಿನಿಯರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಇಬ್ಬರು ಮುಖ್ಯ ಎಂಜಿನಿಯರ್‌ಗಳು ಸೇರಿದಂತೆ 7 ಎಂಜಿನಿಯರ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಮತ್ತು ನಿವೃತ್ತ ಹಿರಿಯ ಎಂಜಿನಿಯರ್ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ನಿರ್ಮಾಣ ಸಂಸ್ಥೆ ಮತ್ತು ವಿನ್ಯಾಸ ಸಲಹೆಗಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದ್ದು, ಆರ್‌ಒಬಿಯಲ್ಲಿ ಅಗತ್ಯ ಸುಧಾರಣೆಗಳನ್ನು ಮಾಡಲು ಸಮಿತಿಯನ್ನು ರಚಿಸಲಾಗಿದೆ. ಸುಧಾರಣೆ ಮಾಡಿದ ನಂತರವೇ ಆರ್‌ಒಬಿ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದ್ದಾರೆ.
ಹೊಸದಾಗಿ ನಿರ್ಮಿಸಲಾದ ಮೇಲ್ಸೇತುವೆಯು ಟೀಕೆ ಮತ್ತು ಅಪಹಾಸ್ಯಕ್ಕೆ ಗುರಿಯಾಯಿತು, ಸ್ಥಳೀಯ ನಿವಾಸಿಗಳು ಮತ್ತು ಜಾಲತಾಣಿಗರು ಅದರ ವಿನ್ಯಾಸವನ್ನು ಪ್ರಶ್ನಿಸಿದರು ಮತ್ತು ವಾಹನಗಳು ತೀಕ್ಷ್ಣವಾದ 90-ಡಿಗ್ರಿ ತಿರುವನ್ನು ಹೇಗೆ ನಿಭಾಯಿಸುವುದು ಹೇಗೆ ಸಾಧ್ಯ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದರು.