HomeKarnatakaಅಪಘಾತದಲ್ಲಿ ಮೃತ ವ್ಯಕ್ತಿ ಸಹೋದರನಿಗೂ ಪರಿಹಾರದ ಹಕ್ಕು ಇದೆ: ಹೈಕೋರ್ಟ್ ಆದೇಶ

ಅಪಘಾತದಲ್ಲಿ ಮೃತ ವ್ಯಕ್ತಿ ಸಹೋದರನಿಗೂ ಪರಿಹಾರದ ಹಕ್ಕು ಇದೆ: ಹೈಕೋರ್ಟ್ ಆದೇಶ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪೋಷಕರಿಗೆ ಸಿಗುವ ಪರಿಹಾರದ ಮೊತ್ತದಲ್ಲಿ ಮೃತನ ಕಿರಿಯ ಸಹೋದರ ಕೂಡ ಪ್ರತ್ಯೇಕ ಪಾಲು ಪಡೆದುಕೊಳ್ಳುವ ಹಕ್ಕು ಹೊಂದಿರುತ್ತಾರೆ ಎಂದು ಹೈಕೋರ್ಟ್ ಆದೇಶಿಸಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಬಿಟೆಕ್ ವಿದ್ಯಾರ್ಥಿ ಚಾಕಲಿ ಗಣೇಶ್(22) 2021ರ ಜುಲೈ 18ರಂದು ಬೆಂಗಳೂರಿನ ಯಲಹಂಕದ ಅಲ್ಲಾಳಸಂದ್ರ ಸೇತುವೆ ಸಮೀಪ ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿ ನಿಂತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದರು.

ಪ್ರಕರಣ ಸಂಬಂಧ ಬೆಂಗಳೂರಿನ ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣ ಘೋಷಿಸಿದ್ದ 23.78 ಲಕ್ಷ ರೂ. ಪರಿಹಾರದ ಮೊತ್ತ ಹೆಚ್ಚಿಸುವಂತೆ ಕೋರಿ ಮೃತನ ಪೋಷಕರಾದ ಚಾಕಲಿ ರಾಮಾಂಜಿನಪ್ಪ, ಸಿ. ಶಿವಮ್ಮ ಮತ್ತು ಸಹೋದರ ಲೋಕೇಶ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ನ್ಯಾಯಾಧಿಕರಣ ಘೋಷಿಸಿದ ಪರಿಹಾರದ ಮೊತ್ತವನ್ನು 23.78 ಲಕ್ಷ ರೂ.ನಿಂದ 39.45 ಲಕ್ಷ ರೂ.ಗೆ ಹೆಚ್ಚಿಸಿದೆ.

ನ್ಯಾಯಾಧೀಕರಣ ಈ ಹಿಂದೆ ಮೃತ ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಉಂಟಾದ ಪ್ರೀತಿ ವಾತ್ಸಲ್ಯದ ನಷ್ಟಕ್ಕಾಗಿ ತಂದೆ ತಾಯಿಗೆ ಪರಿಹಾರ ಘೋಷಿಸಿದೆ. ಆದರೆ ಮೃತನ ಅವಲಂಬಿತನಾಗಿದ್ದ ಕಿರಿಯ ಸಹೋದರನಿಗೆ ಪರಿಹಾರ ನಿಗದಿಪಡಿಸಿಲ್ಲ. ತನ್ನ ಅಣ್ಣನ ಪ್ರೀತಿ ವಾತ್ಸಲ್ಯ ಕಳೆದುಕೊಂಡ ಆತನೂ ಪರಿಹಾರಕ್ಕೆ ಅರ್ಹನಾಗಿರುತ್ತಾನೆ ಎಂದು ಹೈಕೋರ್ಟ್ ಆದೇಶಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular