ಸಾವಿನಲ್ಲೂ ಒಂದಾದ ಶಿಕ್ಷಕ ಸಹೋದರರು: ತಮ್ಮನ ನಿಧನದ ಸುದ್ದಿ ಕೇಳಿ ಕೊನೆಯುಸಿರೆಳೆದ ಅಣ್ಣ

ಕಲಬುರಗಿ: ಕಲಬುರಗಿ ಜಿಲ್ಲೆ ಅಫಜಲಪುರದಲ್ಲಿ ಶಿಕ್ಷಕ ಸಹೋದರರಿಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಅಫಜಲಪುರ ಪಟ್ಟಣದ ಪುರಸಭೆ ಸದಸ್ಯ ಯಮನಪ್ಪ ಭಾಸಗಿ ಅವರ ಪುತ್ರರಾದ ರಮೇಶ ಭಾಸಗಿ(45), ರಾಜು ಭಾಸಗಿ(43) ಮೃತಪಟ್ಟ ಸಹೋದರರು.

ರಮೇಶ ಭಾಸಗಿ ಅಪಜಲಪುರ ತಾಲ್ಲೂಕಿನ ಬಳೂಂಡಗಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದು, ರಾಜು ಭಾಸಗಿ ಯಾದಗಿರಿ ಜಿಲ್ಲೆಯ ದೇವಪೂರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಬ್ಬರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ರಮೇಶ ಖಾಸಗಿ ಅವರು ಹೈದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದು, ನಂತರ ರಾಜು ಅವರನ್ನು ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಅವರು ಕೊನೆಯುಸಿರೆಳೆದಿದ್ದಾರೆ. ಈ ವಿಷಯ ತಿಳಿದ ರಮೇಶ ಅವರಿಗೆ ರಕ್ತದೊತ್ತಡ ಹೆಚ್ಚಾಗಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಂಗಳವಾರ ಬೆಳಗಿನಜಾವ ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read