BREAKING : ‘ವರ್ಗಾವಣೆ ದಂಧೆ’ ನಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ ಸವಾಲ್

ಬೆಂಗಳೂರು : ವರ್ಗಾವಣೆ ದಂಧೆ ನಡೆದಿರುವುದು ಸಾಬೀತು ಆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲಿಸ್ಟ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್ ಸಂಬಂಧ ಮಾತನಾಡಿದರು. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ, ವಿಪಕ್ಷಗಳು ಸುಖಾ ಸುಮ್ಮನೆ ಆರೋಪ ಮಾಡುತ್ತಿದೆ. ಒಂದು ವೇಳೆ ವರ್ಗಾವಣೆ ದಂಧೆ ಮಾಡಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿಡಿಯೋ ವೈರಲ್ ವಿಚಾರ ವ್ಯಾಪಕ ಚರ್ಚೆಯಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಕರೆ ಮೂಲಕ ಯತೀಂದ್ರ ಮಾತನಾಡಿದ್ದಾರೆ. ಅಪ್ಪ ಹೇಳಿ ಎಂದು ಮಾತು ಆರಂಭಿಸುವ ಅವರು ತಾನು ನೀಡಿದ ಪಟ್ಟಿಯ ಬಗ್ಗೆ ಮಾತನಾಡಿ ವಿವೇಕಾನಂದರ ಹೆಸರು ಪ್ರಸ್ತಾಪಿಸಿ ಇದಕ್ಕೆ ಯಾರು ಎಂದು ಕೇಳಿದ್ದಾರೆ. ಬೇರೊಂದು ಲಿಸ್ಟ್ ನೀಡಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹಾದೇವರಿಗೆ ಫೋನ್ ನೀಡುವಂತೆ ಸಿದ್ದರಾಮಯ್ಯರಿಗೆ ತಿಳಿಸುತ್ತಾರೆ. ನಂತರ ಮಹದೇವ ಜೊತೆ ಮಾತನಾಡಿ, ಯಾಕೆ ಯಾವುದ್ಯಾವುದೋ ಕೊಡ್ತೀಯಾ? ಮತ್ತೆ ಇದೆಲ್ಲ ಯಾರು ಕೊಡ್ತಿರೋದು ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read