ಬೆಂಗಳೂರು : ಆಂಧ್ರಪ್ರದೇಶದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಬರ್ಬರ ಹತ್ಯೆಯಾಗಿದ್ದು, ತನಿಖೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಬಿ.ವೈ ವಿಜಯೇಂದ್ರ ‘’ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರಾಗಿದ್ದ ಕೆ.ವಿ. ಪ್ರಶಾಂತ್ ರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಅವರು ಹತ್ಯೆಗೀಡಾಗಿರುವ ಘಟನೆ ಅತ್ಯಂತ ಅಮಾನವೀಯ ಹಾಗೂ ದುಃಖಕರ, ಈ ದುರ್ಘಟನೆಯನ್ನು ಖಂಡಿಸಿ ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಕೊಲೆಗಡುಕರನ್ನು ಬಂಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆ ಚುರುಕುಗೊಳಿಸಲಿ, ನೊಂದ ಕುಟುಂಬಕ್ಕೆ ನ್ಯಾಯ ಸಿಗಲಿ. ಮೃತರ ಕುಟುಂಬ ವರ್ಗದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ’’ ಎಂದು ಟ್ವೀಟ್ ಮಾಡಿದ್ದಾರೆ.
ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರಾಗಿದ್ದ ಕೆ.ವಿ. ಪ್ರಶಾಂತ್ ರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಅವರು ಹತ್ಯೆಗೀಡಾಗಿರುವ ಘಟನೆ ಅತ್ಯಂತ ಅಮಾನವೀಯ ಹಾಗೂ ದುಃಖಕರ, ಈ ದುರ್ಘಟನೆಯನ್ನು ಖಂಡಿಸಿ ಮೃತರ ಆತ್ಮಕ್ಕೆ ಶಾಂತಿ ಕೋರುವೆ.
— Vijayendra Yediyurappa (@BYVijayendra) July 23, 2025
ಕೊಲೆಗಡುಕರನ್ನು ಬಂಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆ… pic.twitter.com/KIWrhkwsQQ