HomeKarnatakaBIG NEWS: ಕೇಂದ್ರ ಸಂಪುಟದಲ್ಲಿ ಬಿ.ವೈ.ರಾಘವೇಂದ್ರಗೆ ಸ್ಥಾನ ವಿಚಾರ : ಮಾಜಿ ಸಿಎಂ BSY ಹೇಳಿದ್ದೇನು?

BIG NEWS: ಕೇಂದ್ರ ಸಂಪುಟದಲ್ಲಿ ಬಿ.ವೈ.ರಾಘವೇಂದ್ರಗೆ ಸ್ಥಾನ ವಿಚಾರ : ಮಾಜಿ ಸಿಎಂ BSY ಹೇಳಿದ್ದೇನು?

ನವದೆಹಲಿ: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಚರ್ಚಿಸಲು ಹೈಕಮಾಂಡ್ ಬುಲಾವ್ ಮೇರೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಮುಹೂರ್ತ ನಿಗದಿಯಾಗಿದೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕನ ಆಯ್ಕೆ, ರಾಜ್ಯಾಧ್ಯಕ್ಷರ ನೇಮಕ ಸೇರಿದಂತೆ ಎಲ್ಲಾ ವಿಚಾರಗಳನ್ನು ವರಿಷ್ಠರ ಜೊತೆ ಚರ್ಚಿಸುತ್ತೇನೆ. ರಾತ್ರಿ 8 ಗಂಟೆಗೆ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಕೇಂದ್ರ ಸಂಪುಟದಲ್ಲಿ ಸಂಸದ ಬಿ.ವೈ.ರಾಘವೇಂದ್ರಗೆ ಸ್ಥಾನ ಸಿಗುವ ಸಾಧ್ಯತೆ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವ ಸಂಪುಟದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular