HomeKarnatakaಚುನಾವಣೆಗೆ ಸ್ಪರ್ಧಿಸದಿರುವ ಕಾರಣ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ

ಚುನಾವಣೆಗೆ ಸ್ಪರ್ಧಿಸದಿರುವ ಕಾರಣ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ: 449 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಿಸಲಾಗಿದ್ದು, ಸೋಮವಾರ ಉದ್ಘಾಟನೆಗೆ ಪ್ರಧಾನಿ ಮೋದಿ ಬರಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ ನಾನು ರಾಜಕೀಯದಿಂದ ನಿವೃತ್ತಿಯಾಗಿಲ್ಲ. ಆದರೆ, ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಅಷ್ಟೇ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆಗೆ ಸ್ಪರ್ಧಿಸದಿದ್ದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ನನಗೆ 70 ವರ್ಷ ದಾಟಿರುವ ಹಿನ್ನೆಲೆ ಈ ತೀರ್ಮಾನ ಮಾಡಿದ್ದೇನೆ. ಮತ್ತೊಬ್ಬರಿಗೆ ಅವಕಾಶ ಸಿಗಬೇಕೆಂಬ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಂಡಿದ್ದೇನೆ. ಇದು ಹೊರತುಪಡಿಸಿದರೆ ಬೇರೆ ಕಾರಣವಿಲ್ಲವೆಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular