HomeKarnataka18 ವರ್ಷ ತುಂಬಿದ 'ಭಾಗ್ಯಲಕ್ಷ್ಮಿ' ಫಲಾನುಭವಿಗಳ ಖಾತೆಗೆ ಒಂದು ಲಕ್ಷ ಜಮಾ ಮಾಡಲು ಬಿ.ಎಸ್.ವೈ. ಆಗ್ರಹ

18 ವರ್ಷ ತುಂಬಿದ ‘ಭಾಗ್ಯಲಕ್ಷ್ಮಿ’ ಫಲಾನುಭವಿಗಳ ಖಾತೆಗೆ ಒಂದು ಲಕ್ಷ ಜಮಾ ಮಾಡಲು ಬಿ.ಎಸ್.ವೈ. ಆಗ್ರಹ

ಶಿವಮೊಗ್ಗ: ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷದ ಫಲಾನುಭವಿಗಳಿಗೆ ಯಾವುದೇ ನೆಪ ಹೇಳದೆ ಹಣ ಕೊಡಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.

ರಾಜ್ಯದ ಬಡ ಹೆಣ್ಣು ಮಕ್ಕಳ ಬಾಳಿಗೆ ಬೆಳಕಾಗುವ ಉದ್ದೇಶದಿಂದ ಮೊದಲ ಬಾರಿಗೆ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಿದ್ದೆ. ಅದರ ಅನುಷ್ಠಾನದ ವಿಚಾರದಲ್ಲಿ ಈಗ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಟೀಕಿಸಿದ್ದಾರೆ.

ತಂದೆ, ತಾಯಿ ಇಬ್ಬರೂ ಮೃತಪಟ್ಟ ಕುಟುಂಬದ ಹೆಣ್ಣು ಮಕ್ಕಳ ಪರಿಸ್ಥಿತಿಯನ್ನು ಮಾನವೀಯತೆ ಎಂದು ಪರಿಗಣಿಸಿ ಫಲಾನುಭವಿಗಳಿಗೆ ಮೊದಲು ಹಣ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಭಾಗ್ಯಲಕ್ಷ್ಮಿ ಬಾಂಡ್ ಪಡೆದ ಫಲಾನುಭವಿಗಳಿಗೆ 18 ವರ್ಷ ತುಂಬಿದರೂ ಅವರ ಬ್ಯಾಂಕ್ ಖಾತೆಗೆ ಒಂದು ಲಕ್ಷ ರೂಪಾಯಿ ಜಮಾ ಆಗಿಲ್ಲ. ರಾಜ್ಯದಲ್ಲಿ 34.50 ಲಕ್ಷ ಭಾಗ್ಯಲಕ್ಷ್ಮಿ ಪಲಾನುಭವಿಗಳಿದ್ದಾರೆ. ಉನ್ನತ ಶಿಕ್ಷಣ ಸೇರಿದಂತೆ ಹೆಣ್ಣು ಮಕ್ಕಳ ಇತರೆ ಕಾರ್ಯಗಳಿಗೆ ಆ ಹಣದಿಂದ ಅನುಕೂಲವಾಗುತ್ತದೆ. ಹೀಗಾಗಿ ಕೂಡಲೇ ಭಾಗ್ಯಲಕ್ಷ್ಮಿ ಬಾಂಡ್ ಹಣ ಕೊಡಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular