BIG NEWS: ಬಿಜೆಪಿ ಹಾಲಿ ಶಾಸಕರಲ್ಲಿ ಎಷ್ಟು ಮಂದಿಗೆ ಟಿಕೆಟ್ ಸಿಗಲ್ಲ ಗೊತ್ತಾ…? ಯಡಿಯೂರಪ್ಪ ಮಹತ್ವದ ಮಾಹಿತಿ

ಬೆಂಗಳೂರು: 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ 3 -4 ಬಾರಿ ಸಭೆ ನಡೆಸಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿ, ಬಹುಶಃ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಸ್ಪಷ್ಟ ಬಹುಮತದಿಂದ ಮತ್ತೆ ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎರಡರಿಂದ ಮೂರು ಕ್ಷೇತ್ರಗಳಲ್ಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲವೆಂಬ ಮಾಹಿತಿ ಇದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ

ಕಾವೇರಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಭೆ ಸುಸೂತ್ರವಾಗಿ ನಡೆದಿದೆ. ಅಂತಿಮವಾಗಿ ಯಾರಿಗೆ ಟಿಕೆಟ್ ಕೊಡಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ಎಲ್ಲರೂ ಸೇರಿ ಒಳ್ಳೆಯ ಅಭ್ಯರ್ಥಿಗಳ ಆಯ್ಕೆ ಮಾಡಿದ್ದೇವೆ. ಪಟ್ಟಿ ವಿಳಂಬಕ್ಕೆ ಬಂಡಾಯದ ಬಿಸಿ ಎಂಬ ಪ್ರಶ್ನೆ ಬರುವುದಿಲ್ಲ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read