ಮಾಜಿ ಸಿಎಂ ಬಿ.ಎಸ್.ವೈ.ಗೆ ಮತ್ತೆ ಶಾಕ್: ಎಫ್ಐಆರ್ ದಾಖಲಿಸಲು ಮರುಪರಿಶೀಲನೆ: ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮಾಹಿತಿ

ನವದೆಹಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಕಾಮಗಾರಿ ಗುತ್ತಿಗೆ ನೀಡಲು ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಅನುಮತಿ ನಿರಾಕರಣೆ ವಿಷಯವನ್ನು ಮರುಪರಿಶೀಲಿಸುವದಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ತಿಳಿಸಿದೆ.

ವಸತಿ ಸಮುಚ್ಚಯ ನಿರ್ಮಾಣಕ್ಕೆ ಬಿಡಿಎಗೆ ನೀಡಿದ ಗುತ್ತಿಗೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಕೋರಿರುವ ಮಂಜೂರಾತಿ ನಿರಾಕರಣೆ ವಿಷಯವನ್ನು ಮರುಪರಿಶೀಲಿಸುವುದಾಗಿ ಕರ್ನಾಟಕ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

ಈ ಪ್ರಕರಣದಲ್ಲಿ ಆರೋಪಗಳು ಗಂಭೀರವಾಗಿರುವುದರಿಂದ ರಾಜ್ಯ ಸರ್ಕಾರ ಈ ವಿಷಯವನ್ನು ಮರುಪರಿಶೀಲಿಸಲಿದೆ ಎಂದು ಕರ್ನಾಟಕದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮನ್ ಪನ್ವಾರ್ ಅವರು ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ, ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ಕರ್ನಾಟಕದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಫ್ಐಆರ್ ದಾಖಲಿಸಲು ಅನುಮತಿ ನಿರಾಕರಣೆ ಮರುಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.

ಯಡಿಯೂರಪ್ಪ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರು, ಇದು ಕೇವಲ ಆಡಳಿತದ ಸೇಡಿನ ಪ್ರಕರಣವಾಗಿ ಕಾಣುತ್ತಿಲ್ಲ. ಬದಲಾಗಿ ಸೇಡಿನ ರೂಪಾಂತರವಾಗಿದೆ ಎಂದು ಹೇಳಿದ್ದಾರೆ.

ಮೂರು ವಾರಗಳ ಬಳಿಕ ವಿಷಯವನ್ನು ಪರಿಗಣಿಸುವುದಾಗಿ ನ್ಯಾಯ ಪೀಠ ಹೇಳಿದೆ. ದೂರುದಾರ ಟಿ.ಜೆ. ಅಬ್ರಹಾಂ ಪರ ವಕೀಲರು, ವಿಷಯವು ಬಹಳ ಕಾಲದವರೆಗೆ ತಡೆಹಿಡಿಯಲ್ಪಟ್ಟಿರುವ ಕಾರಣ ವಿಚಾರಣೆಗೆ ನಿರ್ದಿಷ್ಟ ದಿನಾಂಕ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read