HomeKarnatakaBIG NEWS: ಸಿಎಂ ಸಿದ್ದರಾಮಯ್ಯಗೆ ಅಭಿನಂದಿಸಿದ ಮಾಜಿ ಸಿಎಂ ಯಡಿಯೂರಪ್ಪ

BIG NEWS: ಸಿಎಂ ಸಿದ್ದರಾಮಯ್ಯಗೆ ಅಭಿನಂದಿಸಿದ ಮಾಜಿ ಸಿಎಂ ಯಡಿಯೂರಪ್ಪ

ತುಮಕೂರು: ರಾಜಕೀಯ ಬದ್ಧ ವೈರಿಗಳಂತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಒಂದೇ ವೇದಿಕೆ ಹಂಚಿಕೊಂಡಿದ್ದು, ಸ್ವತ: ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಅವರನ್ನು ಮುಕ್ತ ಕಂಠದಿಂದ ಅಭಿನಂಧಿಸಿದ ಪ್ರಸಂಗ ನಡೆದಿದೆ.

ಡಾ. ಶಿವಕುಮಾರ ಶಿವಮೂರ್ತಿಶಿವಯೋಗಿಗಳವರ 5 ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.

ಶರಣ ಶ್ರೇಷ್ಠ ಬಸವಣ್ಣ ನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ ಅಪಾರ ಸಂತಸ ವ್ಯಕ್ತಪಡಿಸಿದ ಮಾಜಿ ಸಿಎಂ ಯಡಿಯೂರಪ್ಪ, ಬೃಹತ್ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular