HomeJobsಬಿಎಸ್‌ಎನ್‌ಎಲ್‌ನಲ್ಲಿ 120 ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಎಸ್‌ಎನ್‌ಎಲ್‌ನಲ್ಲಿ 120 ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ 2026ನೇ ವರ್ಷ ಭರ್ಜರಿ ಸಿಹಿಸುದ್ದಿಯೊಂದನ್ನು ಹೊತ್ತು ತಂದಿದೆ. ಭಾರತದ ಪ್ರತಿಷ್ಠಿತ ಸಾರ್ವಜನಿಕ ವಲಯದ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತನ್ನ ಟೆಲಿಕಾಂ ಮತ್ತು ಹಣಕಾಸು ವಿಭಾಗಗಳಲ್ಲಿ ಖಾಲಿ ಇರುವ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (SET) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಪ್ರಮುಖ ದಿನಾಂಕಗಳು ಮತ್ತು ಮಾಹಿತಿ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರಮುಖ ಮಾಹಿತಿಗಳು ಇಲ್ಲಿವೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುದ್ದೆಯ ಹೆಸರು: ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (SET)

ಒಟ್ಟು ಹುದ್ದೆಗಳು: 120

ಅರ್ಜಿ ಆರಂಭ: ಫೆಬ್ರವರಿ 5, 2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 7, 2026

ಹುದ್ದೆಗಳ ವಿವರ:
ಟೆಲಿಕಾಂ ಸ್ಟ್ರೀಮ್ – 95 ಹುದ್ದೆಗಳು
ಹಣಕಾಸು (Finance) ಸ್ಟ್ರೀಮ್ – 25 ಹುದ್ದೆಗಳು

ವಯೋಮಿತಿ:
ಕನಿಷ್ಠ ವಯಸ್ಸು – 21 ವರ್ಷ
ಗರಿಷ್ಠ ವಯಸ್ಸು – 30 ವರ್ಷ

ಶೈಕ್ಷಣಿಕ ಅರ್ಹತೆ (Educational Qualification)

BSNL ನೇಮಕಾತಿ 2026ಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಿನ ಅರ್ಹತೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು:

ಟೆಲಿಕಾಂ ವಿಭಾಗಕ್ಕೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ
BE / B.Tech (ಸಂಬಂಧಿತ ಎಂಜಿನಿಯರಿಂಗ್ ಶಾಖೆ)

ಹಣಕಾಸು ವಿಭಾಗಕ್ಕೆ:
ಚಾರ್ಟರ್ಡ್ ಅಕೌಂಟೆಂಟ್ (CA) ಅಥವಾ
ಕಾಸ್ಟ್ ಅಂಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (CMA)

ವಯೋಮಿತಿ ಸಡಿಲಿಕೆ:

ಭಾರತ ಸರ್ಕಾರದ ನಿಯಮಾನುಸಾರ ಕೆಳಗಿನ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ:
SC / ST

OBC

PwBD

ಇತರೆ ಮೀಸಲು ವರ್ಗಗಳು

ಅರ್ಜಿ ಶುಲ್ಕ:

ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ – 2,500 ರೂ.

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ – 1,250 ರೂ.

ಅರ್ಜಿ ಸಲ್ಲಿಸಿದ ನಂತರ, ಮಾರ್ಚ್ 8 ರಿಂದ 15 ರವರೆಗೆ ತಿದ್ದುಪಡಿ ವಿಂಡೋ ಲಭ್ಯ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಬೇಕು:

BSNL ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ https://bsnl.co.in/en

Recruitment ವಿಭಾಗದ ಮೇಲೆ ಕ್ಲಿಕ್ ಮಾಡಿ

2026 ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ

ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯಿಂದ ನೋಂದಣಿ ಮಾಡಿ

ಅರ್ಜಿ ನಮೂನೆಯನ್ನು ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳೊಂದಿಗೆ ಭರ್ತಿ ಮಾಡಿ

ಫೋಟೋ ಸಹಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ

ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ

ಅರ್ಜಿ ಸಲ್ಲಿಸಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular