ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ: BSP ಮುಖ್ಯಸ್ಥೆ ಮಾಯಾವತಿ

ನವದೆಹಲಿ: ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಮುಂಬರುವ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಮೈತ್ರಿ ಅಥವಾ ತೃತೀಯ ರಂಗವನ್ನು ರಚಿಸುವ ವದಂತಿಗಳು ಸಂಪೂರ್ಣವಾಗಿ ಸುಳ್ಳು ಮತ್ತು ತಪ್ಪುದಾರಿಗೆಳೆಯುವಂತಿವೆ. ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಮೈತ್ರಿಗೆ ಸಂಬಂಧಿಸಿದ ಕಥೆಗಳ ಬಗ್ಗೆ ಜಾಗರೂಕರಾಗಿರಿ ಎಂದು ಅವರು ಜನರಿಗೆ ಮನವಿ ಮಾಡಿದ್ದಾರೆ.

ಬಿಎಸ್‌ಪಿ ತನ್ನ ಸ್ವಂತ ಬಲದ ಮೇಲೆ ಸಂಪೂರ್ಣ ಸಿದ್ಧತೆಯೊಂದಿಗೆ ಸಾರ್ವತ್ರಿಕ ಚುನಾವಣೆಗೆ ಹೋರಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಸ್ಥಾನ ಸಾಕಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ-2024ರ ಹಿನ್ನೆಲೆಯಲ್ಲಿ ಪಕ್ಷಗಳು ಸಿದ್ಧತೆ ಆರಂಭಿಸಿವೆ ಎಂಬುದು ಗಮನಾರ್ಹ. ಬಿಜೆಪಿ-ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಏತನ್ಮಧ್ಯೆ, ಬಹುಜನ ಸಮಾಜ ಪಕ್ಷವು ‘ಇಂಡಿಯಾ’ ಮೈತ್ರಿಗೆ ಸೇರಲು ನಿರಾಕರಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read