ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಇಂದು ಮಹತ್ವದ ಸಭೆ: ದೆಹಲಿಗೆ ಯಡಿಯೂರಪ್ಪ, ವಿಜಯೇಂದ್ರ

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಇಂದು ಮಹತ್ವದ ಸಭೆ ನಡೆಯಲಿದೆ.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು. ಈಗಾಗಲೇ 195 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಇದರಲ್ಲಿ ಕರ್ನಾಟಕದ ಒಂದೂ ಹೆಸರು ಇರಲಿಲ್ಲ.

ಭಾನುವಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯಲಿದ್ದು, 18ರಿಂದ 20 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆ. ಜೆಡಿಎಸ್ ಜೊತೆಗೆ ಸ್ಥಾನ ಹೊಂದಾಣಿಕೆ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮಗೊಳಿಸಲಾಗುವುದು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read