‘ಪೋಕ್ಸೋ’ ಕೇಸ್ ನಲ್ಲಿ ಸಿಲುಕಿರುವ ‘BSY’ ಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ; CM ಸಿದ್ದರಾಮಯ್ಯ ಗರಂ

ಬೆಂಗಳೂರು : ‘ಪೋಕ್ಸೋ’ ಕೇಸ್ ನಲ್ಲಿ ಸಿಲುಕಿರುವ ಬಿ.ಎಸ್ ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಬಿ.ಎಸ್ ಯಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್ಶೀಟ್ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ. ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂಬ ವಿಶ್ವಾಸವಿದೆ.

82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್ಶೀಟ್ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

https://twitter.com/siddaramaiah/status/1821089518398607470

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read