HomeKarnatakaಕುದುರೆ ರೇಸ್ ನಲ್ಲಿ ಆಕ್ರಮ ಬೆಟ್ಟಿಂಗ್: ಟರ್ಫ್ ಕ್ಲಬ್ ಮೇಲೆ ದಾಳಿ: 3 ಕೋಟಿ ರೂ...

ಕುದುರೆ ರೇಸ್ ನಲ್ಲಿ ಆಕ್ರಮ ಬೆಟ್ಟಿಂಗ್: ಟರ್ಫ್ ಕ್ಲಬ್ ಮೇಲೆ ದಾಳಿ: 3 ಕೋಟಿ ರೂ ಜಪ್ತಿ

ಬೆಂಗಳೂರು: ಕುದುರೆ ರೇಸ್ ನಲ್ಲಿ ಅಕ್ರಮ ಬೆಟ್ಟಿಂಗ್ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಟರ್ಫ್ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಸುಮಾರು ಮೂರು ಕೋಟಿ ರೂ. ನಗದು ಜಪ್ತಿ ಮಾಡಲಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಬೆಂಗಳೂರು ಟರ್ಫ್ ಕ್ಲಬ್ ಮೇಲೆ ಸಿಸಿಬಿ ಹೆಚ್ಚುವರಿ ಪೋಲಿಸ್ ಆಯುಕ್ತ ಚಂದ್ರಗುಪ್ತ ಸಾರಥ್ಯದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಆರು ಗಂಟೆಗೂ ಅಧಿಕ ಕಾಲ ಟರ್ಫ್ ಕ್ಲಬ್ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ ಬೆಟ್ಟಿಂಗ್ ಕೌಂಟರ್ ನಲ್ಲಿದ್ದ ಅನಧಿಕೃತ ಮೂರು ಕೋಟಿ ರೂ. ವಶಕ್ಕೆ ಪಡೆದಿದೆ. 60ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಜಿ.ಎಸ್.ಟಿ. ಇಲ್ಲದೇ ಅಕ್ರಮವಾಗಿ ಬೆಟ್ಟಿಂಗ್ ನಡೆದ ಮಾಹಿತಿ ಹಿನ್ನೆಲೆಯಲ್ಲಿ ದಿಢೀರ್ ದಾಳಿ ನಡೆಸಲಾಗಿದೆ. ಕೌಂಟರ್ ಗಳಲ್ಲಿ ಕುದುರೆ ರೇಸ್ ಗೆ ಬಾಜಿ ಕಟ್ಟಿದ ಹಣ ಪರಿಶೀಲಿಸಿದ್ದು, ಮೂರು ಕೋಟಿಗೂ ಅಧಿಕ ಅಕ್ರಮ ಹಣ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular