ಹುಬ್ಬಳ್ಳಿ: ಹುಬ್ಬಳ್ಳಿಯ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಭರತ್ ಹೆಗಡೆ ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ. ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭರತ್ ಹೆಗಡೆಯನ್ನು ಬಂಧಿಸಿದ್ದಾರೆ.
6 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಹಣದ ಸಮೇತ ಭರತ್ ಹೆಗಡೆ ಸಿಕ್ಕಿ ಬಿದ್ದಿದ್ದಾರೆ.
ಲಾರಿ ಹಗೂ ಪೆಟ್ರೋಲ್ ಬಂಕ್ ಮಾಲೀಕನಿಗೆ 10 ಲಕ್ಷ ರೂ ನೀಡುವಂತೆ ಭರತ್ ಹೆಗಡೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 6 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

