HomeKarnatakaಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

ಬೆಂಗಳೂರು-“ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಸ್ಥಾಪಿಸಬೇಕೆಂದು ಬೌದ್ಧ ಬಿಕ್ಕುಗಳ ನಿಯೋಗವು ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿತು.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ಜಿಗ್ಮೇಟ್ ವಾಂಗ್ಡೋಸ್ ಜ್ಯೋತಿ ಅವರ ನೇತೃತ್ವದಲ್ಲಿ ದೇಶದ ವಿವಿಧ ರಾಜ್ಯಗಳ ಬೌಧ ಬಿಕ್ಕುಗಳನ್ನೊಳಗೊಂಡ ನಿಯೋಗವು ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ಅಭಿನಂದಿಸಿ, ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಬೌಧ ಬಿಕ್ಕುಗಳಾದ ಲೋಬ್ಸಂಗ್ ನೋರ್ಬು, ಪ್ಯಾನಿಚೈಟೊ ಮತ್ತಿತರರು ಇದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“2026-27ನೇ ಸಾಲಿನ ಬಜೆಟ್‌ನಲ್ಲಿ ಬೌದ್ಧ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಅಭಿವೃದ್ಧಿ ಮಂಡಳಿ/ ನಿಗಮ ರಚನೆಗೆ ಅವಕಾಶ ಕಲ್ಪಿಸಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಗಿದೆ. ಪ್ರಸ್ತುತ ಬೌದ್ಧ ಅಭಿವೃದ್ಧಿ ನಿಗಮವು ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಕ್ರಿಶ್ಚಿಯನ್ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿಯೇ ತರಬೇಕು” ಎಂದು ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular