Budget Breaking : 2025-26 ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡಿಸಿದ ನಿರ್ಮಲಾ ಸೀತಾರಾಮನ್, ಹೀಗಿದೆ ಹೈಲೆಟ್ಸ್

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ದಾಖಲೆಯ ಎಂಟನೇ ಕೇಂದ್ರ ಬಜೆಟ್ ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಬಜೆಟ್ ನಲ್ಲಿ ದೇಶದ ಜನತೆಗೆ ಸಿಕ್ಕಿದ್ದೇನು..?

ಇಲ್ಲಿದೆ ಹೈಲೆಟ್ಸ್

ರಾಜ್ಯಗಳಿಗೆ 50 ವರ್ಷ ಬಡ್ಡಿ ರಹಿತ ಸಾಲ

ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಟ್ಟಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬಾಡಿಗೆಯ ಮೇಲಿನ TDS ಮಿತಿ ಹೆಚ್ಚಳ

ಬಾಡಿಗೆಯ ಮೇಲಿನ ಟಿಡಿಎಸ್ನ ವಾರ್ಷಿಕ ಮಿತಿಯನ್ನು 2.40 ಲಕ್ಷ ರೂ.ನಿಂದ 6 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಹಿರಿಯ ನಾಗರಿಕರಿಗೆ TDS ಮಿತಿಯಲ್ಲಿ ಹೆಚ್ಚಳ

ಹೊಸ ಆದಾಯ ತೆರಿಗೆ ಮಸೂದೆಯು ಮಧ್ಯಮ ವರ್ಗದ ಮೇಲೆ ಕೇಂದ್ರೀಕೃತವಾಗಿರುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿಯನ್ನು 50,000 ರೂ.ನಿಂದ 1 ಲಕ್ಷ ರೂ.ಗೆ ಹೆಚ್ಚಿಸಲಾಗುತ್ತಿದೆ ಎಂದು ಅವರು ಘೋಷಿಸಿದರು.

ಆದಾಯ ತೆರಿಗೆ ವಿನಾಯಿತಿ ಮಿತಿ 12 ಲಕ್ಷಕ್ಕೆ ಏರಿಕೆ

ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
36 ಜೀವರಕ್ಷಕ ಔಷಧಿಗಳ ಕಸ್ಟಮ್ ಸುಂಕದಿಂದ ವಿನಾಯಿತಿ

36 ಜೀವ ರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

* ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮೊಬೈಲ್ , ಎಲೆಕ್ಟ್ರಿಕ್ ಕಾರು, LED ಟಿವಿ ಬೆಲೆ ಇಳಿಕೆ ಮಾಡುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

* ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

* ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆ ವೇಳೆ ಜಿಲ್ಲಾ ಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲಾಗುವುದು. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರುಗಳಿಗೆ ಅಲೆದಾಟ ನಡೆಸುವುದು ತಪ್ಪಲಿದೆ ಎಂದರು.
ಇನ್ನು 36 ಜೀವರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಅಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗುವುದು ಎಂದು ವಿತ್ತ ಸಚಿವರು ಘೋಷಿಸಿದ್ದಾರೆ.

* ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮೊಬೈಲ್ , ಎಲೆಕ್ಟ್ರಿಕ್ ಕಾರು, LED ಟಿವಿ ಬೆಲೆ ಇಳಿಕೆ ಮಾಡುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

* ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ನೊಂದಿಗೆ ಆಟಿಕೆಗಳ ವಲಯಕ್ಕಾಗಿ, ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಸರ್ಕಾರವು ಯೋಜನೆಯನ್ನು ಜಾರಿಗೊಳಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

*ಪ್ರಧಾನ ಮಂತ್ರಿ ಧನಧಾನ್ಯ ಕೃಷಿ ಯೋಜನೆಯಿಂದ 1.7 ಕೋಟಿ ರೈತರಿಗೆ ಅನುಕೂಲವಾಗುತ್ತಿದೆ. ಇದು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

*KISAN ಕ್ರೆಡಿಟ್ ಕಾರ್ಡ್ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಿಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

*ಇಂಡಿಯಾ ಪೋಸ್ಟ್ ಅನ್ನು ಪ್ರಮುಖ ಸಾರ್ವಜನಿಕ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

*ಪಾದರಕ್ಷೆ ಹಾಗೂ ಚರ್ಮದ ಉದ್ಯಮಕ್ಕೆ ಯೋಜನೆ

22 ಲಕ್ಷ ವ್ಯಕ್ತಿಗಳಿಗೆ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆಯಿದೆ, 4 ಲಕ್ಷ ಕೋಟಿ ರೂ. ಆದಾಯವನ್ನು ಸಾಧಿಸುತ್ತದೆ ಮತ್ತು ರಫ್ತುಗಳನ್ನು 1.1 ಲಕ್ಷ ಕೋಟಿಗೆ ರೂ.ಗೆ ಹೆಚ್ಚಿಸುತ್ತದೆ ಎಂದರು.

* ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ ನೊಂದಿಗೆ ಆಟಿಕೆಗಳ ವಲಯಕ್ಕಾಗಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಸರ್ಕಾರ ಯೋಜನೆ ಜಾರಿಗೊಳಿಸುತ್ತಿದೆ. ಆಟಿಕೆಗಳ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

* ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

* ಗ್ರೀನ್ ಫೀಲ್ಡ್’ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

* ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

* ಒಂಬತ್ತು ವಸ್ತುಗಳು ಸುಂಕ ಮುಕ್ತ ವಲಯದಲ್ಲಿರಲಿವೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು, 36 ಜೀವ ಉಳಿಸುವ ಔಷಧಿಗಳನ್ನು ಸುಂಕ ಮುಕ್ತಗೊಳಿಸಲಾಗಿದೆ.

* ಉಡಾನ್ ಪ್ರಾದೇಶಿಕ ಸಂಪರ್ಕ ಯೋಜನೆಯು 1.5 ಕೋಟಿ ಮಧ್ಯಮ ವರ್ಗದವರಿಗೆ ತ್ವರಿತ ಪ್ರಯಾಣದ ಆಕಾಂಕ್ಷೆಗಳನ್ನು ಪೂರೈಸಲು ಅನುವು ಮಾಡಿಕೊಟ್ಟಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಯಶಸ್ಸಿನಿಂದ ಪ್ರೇರಿತರಾಗಿ, 120 ಹೊಸ ಸ್ಥಳಗಳಿಗೆ ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲು ಪರಿಷ್ಕೃತ ಉಡಾನ್ ಯೋಜನೆಯನ್ನು ಪ್ರಾರಂಭಿಸಲಾಗುವುದು.

* ಮುಂದಿನ ವರ್ಷ ವೈದ್ಯಕೀಯ ಕಾಲೇಜುಗಳಲ್ಲಿ ಹತ್ತು ಸಾವಿರ ಹೆಚ್ಚುವರಿ ಸೀಟುಗಳನ್ನು ಸೇರಿಸಲಾಗುವುದು ಮತ್ತು ಮುಂದಿನ ಐದು ವರ್ಷಗಳಲ್ಲಿ 75,000 ಸೀಟುಗಳನ್ನು ಸೇರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025 ಅನ್ನು ಮಂಡಿಸುವಾಗ ಘೋಷಿಸಿದರು.

 

 

 

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read