HomeKarnatakaKarnataka Budget Breaking : ಆಗದು ಎಂದು ಕೈಕಟ್ಟಿ ಕುಳಿತರೆ…. ; ಡಾ.ರಾಜ್ ಹಾಡಿನ ಸಾಲಿನೊಂದಿಗೆ...

Karnataka Budget Breaking : ಆಗದು ಎಂದು ಕೈಕಟ್ಟಿ ಕುಳಿತರೆ…. ; ಡಾ.ರಾಜ್ ಹಾಡಿನ ಸಾಲಿನೊಂದಿಗೆ ಬಜೆಟ್ ಆರಂಭಿಸಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ, ಕುತೂಹಲಗಳೂ ಹೆಚ್ಚಾಗಿವೆ.
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಡಾ.ರಾಜ್ ಹಾಡಿನ ಸಾಲು ಉಲ್ಲೇಖಿಸಿದ್ದಾರೆ. ಸದನದಲ್ಲಿ ಸಿಎಂ ಸಿದ್ದರಾಮಯ್ಯ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದು, ಶರಣಚಿಂತನೆಯನ್ನ ಓದಿ ಹೇಳಿದ ಸಿಎಂ, ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದರು.

ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular