HomeAgricultureಬಜೆಟ್ ಬಗ್ಗೆ ಭಾರೀ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ...

ಬಜೆಟ್ ಬಗ್ಗೆ ಭಾರೀ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ

ನವದೆಹಲಿ: ಭಾರಿ ನಿರೀಕ್ಷೆಗಳ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ಮೋದಿ -3 ಸರ್ಕಾರದ ಎರಡನೇ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ.

ಬಜೆಟ್ ನಲ್ಲಿ ಬಡವರು, ಮಧ್ಯಮ ವರ್ಗದವರು, ಮಹಿಳೆಯರು, ಯುವಕರಿಗೆ ಭರ್ಜರಿ ಕೊಡುಗೆ ನೀಡುವ ಸುಳಿವನ್ನು ಪ್ರಧಾನಿ ಮೋದಿ ನೀಡಿದ್ದು, ಬಜೆಟ್ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ರೈತರಿಗೆ ನೀಡುತ್ತಿರುವ ವಾರ್ಷಿಕ 6,000ರೂ. ಸಹಾಯಧನದ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೊತ್ತವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ರೈತರ ಆದಾಯ ಹೆಚ್ಚಳಕ್ಕೆ ಕ್ರಮ, ಸುಲಭ ಸಾಲ ಸೌಲಭ್ಯ, ಸಾವಯವ ಕೃಷಿಗೆ ಹೆಚ್ಚಿನ ಉತ್ತೇಜನ, ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಕೆ ಸೇರಿದಂತೆ ತಂತ್ರಜ್ಞಾನ ಬಳಕೆಗೆ ಬಜೆಟ್ ನಲ್ಲಿ ಹಲವು ಕ್ರಮ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಆರ್ಥಿಕ ಪ್ರಗತಿಯ ಮಂದಗತಿಯ ಹಿನ್ನೆಲೆಯಲ್ಲಿ ಉದ್ಯೋಗ ಸೃಷ್ಟಿ ಮತ್ತು ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಜನರ ಖರೀದಿ ಶಕ್ತಿ ಹೆಚ್ಚಿಸಲು ಹಣದುಬ್ಬರ ನಿಯಂತ್ರಣಕ್ಕೆ ಕ್ರಮ ಘೋಷಣೆ ಸಾಧ್ಯತೆ ಇದೆ. ಮಹಿಳೆಯರು ಮತ್ತು ಯುವಕರಿಗೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಈ ಬಾರಿ ಬಜೆಟ್ ನಲ್ಲಿ ಮಹಿಳಾ ಕೇಂದ್ರೀತ, ಯುವಜನ ಕೇಂದ್ರಿತ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಪ್ರಧಾನಿಯವರು ತಮ್ಮ ಮಾತುಗಳಲ್ಲಿ ಈ ಬಗ್ಗೆ ಸುಳಿವು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular