HomeIndiaಜ. 31ರಿಂದ ಸಂಸತ್ ಬಜೆಟ್ ಅಧಿವೇಶನ: ಮೊದಲ ದಿನವೇ ರಾಷ್ಟ್ರಪತಿ ಭಾಷಣ, ಆರ್ಥಿಕ ಸಮೀಕ್ಷಾ ವರದಿ:...

ಜ. 31ರಿಂದ ಸಂಸತ್ ಬಜೆಟ್ ಅಧಿವೇಶನ: ಮೊದಲ ದಿನವೇ ರಾಷ್ಟ್ರಪತಿ ಭಾಷಣ, ಆರ್ಥಿಕ ಸಮೀಕ್ಷಾ ವರದಿ: ಮರುದಿನ ಕೇಂದ್ರ ಬಜೆಟ್

ನವದೆಹಲಿ: ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನ ಜನವರಿ 31 ರಿಂದ ಆರಂಭವಾಗಲಿದೆ. ನೂತನ ಸಂಸತ್ ಭವನದ ಲೋಕಸಭೆ ಸಭಾಂಗಣದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ.

ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಜನವರಿ 3ರಿಂದ ಆರಂಭವಾಗಲಿದೆ. ಮೊದಲ ದಿನ ರಾಷ್ಟ್ರಪತಿ ಭಾಷಣದ ನಂತರ ಆರ್ಥಿಕ ಸಮೀಕ್ಷಾ ವರದಿಯನ್ನು ಲೋಕಸಭೆ, ರಾಜ್ಯಸಭೆಯಲ್ಲಿ ಮಂಡಿಸಲಾಗುವುದು. ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

ಫೆಬ್ರವರಿ 3 ಮತ್ತು 4ರಂದು ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅವಕಾಶ ನೀಡಲಾಗಿದೆ. ಫೆಬ್ರವರಿ 6ರಂದು ಪ್ರಧಾನಿ ಮೋದಿ ಚರ್ಚೆಗೆ ಉತ್ತರ ನೀಡುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಜನವರಿ 30ರಂದು ಬಜೆಟ್ ಅಧಿವೇಶನ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.

ಬಜೆಟ್ ಅಧಿವೇಶನದ ಮೊದಲನೆಯ ಭಾಗ ಜನವರಿ 31 ರಿಂದ ಫೆಬ್ರವರಿ 13ರವರೆಗೆ ನಡೆಯಲಿದೆ. ಮಾರ್ಚ್ 10ರಿಂದ ವಿವಿಧ ಇಲಾಖೆಗಳ ಸಚಿವರಿಂದ ಅನುದಾನದ ಬೇಡಿಕೆ ಚರ್ಚೆ ನಡೆಯಲಿದ್ದು, ಏಪ್ರಿಲ್ 4ರಂದು ಅಧಿವೇಶನ ಮುಕ್ತಾಯವಾಗಲಿದೆ. ಜನವರಿ 31 ರಿಂದ ಏಪ್ರಿಲ್ 4ರವರೆಗೆ ಒಟ್ಟು 27 ದಿನಗಳ ಕಾಲ ಸಂಸತ್ ಬಜೆಟ್ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular