BIG NEWS : ಫೆ.12 ರಿಂದ ಬಜೆಟ್ ಅಧಿವೇಶನ ಆರಂಭ, ಫೆ.16 ರಂದು ಆಯವ್ಯಯ ಮಂಡನೆ

ಬೆಂಗಳೂರು : ಫೆಬ್ರವರಿ 12 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16 ರಂದು ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದರು.

ಫೆಬ್ರವರಿ 12 ರಂದು ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಅಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಲಾಪಕ್ಕೆ ಯಾವುದೇ ಶಾಸಕರು ಗೈರಾಗಬಾರದು ಎಂದು ತಿಳಿಸಿದರು.
12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನೀರ್ಣಯ ಅಂಗೀಕಾರವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 02ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು ಎಂದರು.

ಈ ಅಧಿವೇಶನದಲ್ಲಿ ಸರಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. 10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪಗಳನ್ನ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read