HomeLatest NewsBIG NEWS : ಮಾರ್ಚ್ ತಿಂಗಳಿನಲ್ಲಿ 'ಬಜೆಟ್' ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ CM...

BIG NEWS : ಮಾರ್ಚ್ ತಿಂಗಳಿನಲ್ಲಿ ‘ಬಜೆಟ್’ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಬಜೆಟ್ ಮಂಡನೆಗೆ ಸಜ್ಜಾಗುತ್ತಿದ್ದು, ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯನವರು ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದು, ಈ ಬಾರಿ ಅವರ 16ನೇ ಬಜೆಟ್ ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.

2026-27ನೇ ಸಾಲಿನ ಆಯವ್ಯಯದ ಪೂರ್ವಭಾವಿ ಸಭೆಯ ಭಾಗವಾಗಿ ಇಂದು ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಇಲಾಖೆ ಈ ವರೆಗಿನ ಸಾಧನೆಗಳು ಹಾಗೂ ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ್ ಖಂಡ್ರೆ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ, ತೆರಿಗೆ ಸಂಗ್ರಹದ ಗುರಿ ಮತ್ತು ವಿವಿಧ ಇಲಾಖೆಗಳ ಬೇಡಿಕೆ. , ಮುಂಬರುವ ಬಜೆಟ್ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಬೇಕು ಎಂಬುದರ ಬಗ್ಗೆ ಸಿಎಂ ಸಭೆ ನಡೆಸಲಿದ್ದಾರೆ. ಅದೇ ರೀತಿ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಬೇಕಾದ ಬೃಹತ್ ಮೊತ್ತದ ಹಣಕಾಸು ಹೊಂದಾಣಿಕೆಯ ಬಗ್ಗೆ ವಿಶೇಷ ಗಮನ ಹರಿಸಲು ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಜೆಟ್ ಪ್ರಮುಖ ನಿರೀಕ್ಷೆಗಳು:
• ಗ್ಯಾರಂಟಿ ಯೋಜನೆಗಳ ಮುಂದುವರಿಕೆ: ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಗೆ ಸುಮಾರು 60,000 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಮೀಸಲಿಡಬೇಕಾದ ಸವಾಲು ಸಿಎಂ ಮುಂದಿದೆ.

• ಬೆಂಗಳೂರು ಅಭಿವೃದ್ಧಿ: ‘ಬ್ರಾಂಡ್ ಬೆಂಗಳೂರು’ ಅಡಿಯಲ್ಲಿ ಮೆಟ್ರೋ ವಿಸ್ತರಣೆ, ಟನಲ್ ರಸ್ತೆಗಳು ಮತ್ತು ಫ್ಲೈಓವರ್ಗಳಿಗೆ ಹೆಚ್ಚಿನ ಅನುದಾನ ನಿರೀಕ್ಷಿಸಲಾಗಿದೆ.

• ನೀರಾವರಿ ಮತ್ತು ಕೃಷಿ: ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಸಾಲ ಮನ್ನಾ ಅಥವಾ ಹೊಸ ನೀರಾವರಿ ಯೋಜನೆಗಳ ಘೋಷಣೆಯಾಗುವ ಸಾಧ್ಯತೆಯಿದೆ.

• ಸಂಪನ್ಮೂಲ ಕ್ರೋಢೀಕರಣ: ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮದ್ಯದ ಮೇಲಿನ ಸುಂಕ ಏರಿಕೆ ಅಥವಾ ನೋಂದಣಿ ಶುಲ್ಕದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular