BUDGET BREAKING : 5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಅನುದಾನ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈಗಾಗಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇದೀಗ 14 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ.

ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ ಅನುದಾನ ಹಾಗೂ 5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಅನುದಾನವನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗಿರುವುದರಿಂದ ವಾರ್ಷಿಕವಾಗಿ 52 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಸರ್ವಜನಾಂಗದ ಶಾಂತಿಯ ತೋಟ ನಮ್ಮ ಗುರಿ, ಭ್ರಷ್ಟಾಚಾರ ಮುಕ್ತ ನಮ್ಮ ಗುರಿ, ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಸುಳ್ಳು ಸುದ್ದಿಗಳನ್ನು ಕೆಲವರು ಹಬ್ಬಿಸುತ್ತಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read