
ಶಾಸಕರ ಜಾಗದಲ್ಲಿ ಅನಾಮಿಕ ವ್ಯಕ್ತಿ ಕುಳಿತಿದ್ದು, ಇದನ್ನು ಗಮನಿಸಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಸ್ಪೀಕರ್ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಶಾಸಕರಲ್ಲದ ಅನಾಮಿಕ ವ್ಯಕ್ತಿ ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದರು. ಒಬ್ಬ ವ್ಯಕ್ತಿ ಬಂದು ಸದನಲ್ಲಿ 15 ನಿಮಿಷ ಕುಳಿತಿದ್ದು, ಆತ ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡಿದ್ದಾನೆ , ನಂತರ 15 ನಿಮಿಷದಲ್ಲಿ ಆತ ನಾಪತ್ತೆಯಾಗಿದ್ದಾನೆ ಎಂದು ಶಾಸಕ ಶರಣಗೌಡ ಕಂದಕೂರು ಹೇಳಿದ್ದಾರೆ. ಅದೃಷ್ಟವಶಾತ್ ಯಾವುದೇ ಘಟನೆ ನಡೆದಿಲ್ಲ.
ದಾಖಲೆಯ 14ನೇ ಬಜೆಟ್ ಮಂಡಿಸಿದ ಸಿಎಂ
2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ 50 ನಿಮಿಷಗಳ ಕಾಲ ನಿರಂತರವಾಗಿ ಬಜೆಟ್ ಓದಿದ್ದಾರೆ. ಬಜೆಟ್ ಮಂಡನೆ ಮುಗಿಯುತ್ತಿದ್ದಂತೆ ಸಚಿವರು, ಶಾಸಕರು ಅಭಿನಂದನೆ ಸಲ್ಲಿಸಿದರು. ಮುಖ್ಯಮಂತ್ರಿಯಾಗಿ 7 ಬಾರಿ ಬಜೆಟ್ ಮಂಡಿಸಿದ ಕಾರಣಕ್ಕೆ ಹಾಗೂ ಒಟ್ಟು 14 ಬಾರಿ ಆಯವ್ಯಯ ಮಂಡಿಸುವ ಮೂಲಕ ರಾಜ್ಯದಲ್ಲಿ ಹೊಸ ದಾಖಲೆ ಬರೆದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರನ್ನು ಅಭಿನಂದಿಸಲಾಯಿತು.ಈ ಬಾರಿಯ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂ ಆಗಿದೆ. ಬಜೆಟ್ ನಲ್ಲಿ 22,441 ಕೋಟಿ ರೂ ಸಾಲ ಮರು ಪಾವತಿಗೆ ವ್ಯಯವಾಗಲಿದೆ. ಬಂಡವಾಳ ಹೂಡಿಕೆಗೆ 54,374 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.

