HomeKarnatakaBREAKING NEWS: ನಿರ್ಮಾಣ ಹಂತದ ಕಟ್ಟಡದಿಂದ ಶಾಲೆಯ ಮೇಲೆ ಬಿದ್ದ ಬ್ರಿಕ್ಸ್: ಕುಸಿದುಬಿದ್ದ ಶಾಲೆಯ ಮೇಲ್ಛಾವಣಿ;...

BREAKING NEWS: ನಿರ್ಮಾಣ ಹಂತದ ಕಟ್ಟಡದಿಂದ ಶಾಲೆಯ ಮೇಲೆ ಬಿದ್ದ ಬ್ರಿಕ್ಸ್: ಕುಸಿದುಬಿದ್ದ ಶಾಲೆಯ ಮೇಲ್ಛಾವಣಿ; ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ನಿರ್ಮಾಣ ಹಂತದ ಕಣ್ಣಡದಿಂದ ಶಾಲೆಯ ಮೇಲೆ ಬ್ರಿಕ್ಸ್ ಬಿದ್ದು ಶಾಲೆಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕುಂಬಾರಪೇಟೆಯಲ್ಲಿ ನಡೆದಿದೆ.

ಶಾಲೆಯ ಪಕ್ಕದಲ್ಲಿಯೇ ನಿರ್ಮಿಸಲಾಗುತ್ತಿದ್ದ ಬೃಹತ್ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆಗಳು ಶಾಲೆಯ ಮೇಲೆ ಬಿದ್ದಿವೆ. ಪರಿಣಾಮ ಶಾಲೆಯ ಮೇಲ್ಛಾವಣಿಯೇ ಕುಸಿದು ಬಿದ್ದಿದೆ. ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular