ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತಗೊಂಡಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸಲಾಗಿದೆ.
ಬೆಂಗಳೂರಿನ ಸಂಪಂಗಿರಾಮನಗರದ ಬಳಿ ಕಟ್ಟಡ ಕುಸಿತಗೊಂಡಿದೆ. ಕಟ್ಟಡದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಮತ್ತಷ್ಟು ಜನ ಸಿಲುಕಿದ್ದಾರೆಯೇ ಎಂಬ ಬಗ್ಗೆ ಶೋಧ ನಡೆಸಲಾಗುತ್ತಿದೆ.
ಸುಮಾರು ಐವತ್ತು ವರ್ಷ ಹಳೆಯ ಕಟ್ಟಡ ಇದಾಗಿದ್ದು, ಶಿಥಿಲಗೊಂಡು ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ.