HomeKarnatakaಪೊಲೀಸ್ ಠಾಣೆ ಕಟ್ಟಡದ 4ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಪೊಲೀಸ್ ಠಾಣೆ ಕಟ್ಟಡದ 4ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಹಾಸನ: ಪೊಲೀಸ್ ಠಾಣೆ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾಸನ ನಗರದ ಪೊಲೀಸ್ ಸಂಕೀರ್ಣ ಕಟ್ಟಡದಲ್ಲಿ ನಡೆದಿದೆ.

ಹಾಸನದ ಎನ್.ಆರ್. ಸರ್ಕಲ್ ನಲ್ಲಿರುವ ಪೊಲೀಸ್ ಸಂಕೀರ್ಣ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಸುನಿಲ್(30) ಸಾವನ್ನಪ್ಪಿದ್ದಾರೆ. ಸುನಿಲ್ ಹೊಳೆನರಸೀಪುರ ತಾಲೂಕಿನ ಮಲ್ಲೇನಹಳ್ಳಿಯ ನಿವಾಸಿಯಾಗಿದ್ದಾರೆ.

ಮಟನ್ ಅಂಗಡಿಯಲ್ಲಿ ಸುನಿಲ್ ಕೆಲಸ ಮಾಡುತ್ತಿದ್ದರು. ಇಂದು ಉಪಾಧೀಕ್ಷಕರ ಕಚೇರಿಗೆ ಸುನಿಲ್ ಬಂದಿದ್ದರು. ಹಾಸನ ನಗರ ಠಾಣೆ, ಗ್ರಾಮಾಂತರ ಠಾಣೆ, ಸಿಇಎನ್ ಠಾಣೆ, ಉಪಾಧೀಕ್ಷಕರ ಕಚೇರಿ ಬಳಿ ಸುತ್ತಾಡುತ್ತಿದ್ದ ಸುನಿಲ್ ನಂತರ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೂಡಲೇ ಪೊಲೀಸ್ ಸಿಬ್ಬಂದಿ ಅವರನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಸುನಿಲ್ ಕೊನೆಯುಸಿರೆಳೆದಿದ್ದಾರೆ. ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular