HomeLatest NewsBREAKING: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

BREAKING: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆ;ಲಮಂಗಲ ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ನಡೆದಿದೆ.

ಕಟ್ಟಡದ ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾರೆ. ಬೀರಪ್ಪ (34) ಮೃತ ದುರ್ದೈವಿ. ಬೀರಪ್ಪ ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ನಿವಾಸಿ.

ಕಳೆದ 8 ವರ್ಷಗಳಿಂದ ಬೀರಪ್ಪ, ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಇದೀಗ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular