ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ: ಹೋರಿ ತಿವಿದು ಯುವಕ ಸಾವು, ಇಬ್ಬರಿಗೆ ತೀವ್ರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾರೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ಪರಶುರಾಮ(27) ಮೃತಪಟ್ಟ ಯುವಕ. ಹೋರಿ ಬೆದರಿಸುವ ಸ್ಪರ್ಧೆ ನೋಡುವಾಗ ಹೋರಿ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪರಶುರಾಮ ಕುಟುಂಬದವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಹೋರಿ ಬೆದರಿಸುವ ಸ್ಪರ್ಧೆಯ ಸಂಘಟಕರಾದ ಶಿವಮೊಗ್ಗದ ಸುದರ್ಶನ್ ಬಾಯ್ಸ್ ಮತ್ತು ತರಲಘಟ್ಟದ ಐವರು, ದೊಡ್ಡ ಜೋಗಿಹಳ್ಳಿಯ ಇಬ್ಬರು ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮರದ ಮೇಲೆ ಕುಳಿತು ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತ್ತಿದ್ದ ರಾಣೆಬೆನ್ನೂರು ತಾಲೂಕಿನ ಯುವಕ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಕುಂಸಿ ಗ್ರಾಮದ ಯುವಕ ಹೋರಿ ತಿವಿದು ಗಾಯಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read