ಏರ್ ಫೈಬರ್ ಹೊಸ ಗ್ರಾಹಕರಿಗೆ ‘ಫ್ರೀಡಂ ಆಫರ್’ ನಲ್ಲಿ ಜಿಯೋದಿಂದ ಬಂಪರ್ ಆಫರ್

ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದಹಾಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ ಸಂಸ್ಥೆಯಾಗಿದೆ.

1.2 ಕೋಟಿ ಮನೆಗಳೊಂದಿಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಭಾರತೀಯರ ಮನೆಗಳನ್ನು ಇನ್ನಷ್ಟು ವೇಗವಾಗಿ ಡಿಜಿಟೈಸ್ ಮಾಡುವ ಉದ್ದೇಶದಿಂದ ಮತ್ತು ಭಾರತವನ್ನು ಡಿಜಿಟಲ್ ಸಮುದಾಯವಾಗಿ ಮಾರ್ಪಡಿಸುವ ಉದ್ದೇಶದಿಂದ ಜಿಯೋದಿಂದ ಈ ಭರವಸೆಯ ಕೊಡುಗೆಯನ್ನು ಘೋಷಣೆ ಮಾಡಲಾಗಿದೆ. ಇದರಿಂದಾಗಿ ಇನ್ನಷ್ಟು ಮನೆಗಳಲ್ಲಿ ಈ ಸಂಪರ್ಕ ಪಡೆಯುವುದಕ್ಕೆ ಉತ್ತೇಜನ ದೊರೆಯುತ್ತದೆ.

ಈಗಾಗಲೇ ಕೈಗೆಟುಕುವ ಬೆಲೆಯಲ್ಲಿ ಇರುವ ಜಿಯೋಏರ್ ಫೈಬರ್ ಪ್ಲಾನ್ ಗಳ ಜೊತೆಗೆ ಶೇಕಡಾ 30ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ಕಂಪನಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಫ್ರೀಡಂ ಆಫರ್ ಜೊತೆಗೆ ಹೊಸ ಜಿಯೋಏರ್ ಫೈಬರ್ ಬಳಕೆದಾರರು ಶೇ 30ರಷ್ಟು ರಿಯಾಯಿತಿಯನ್ನು ಹೊಸ ಸಂಪರ್ಕವನ್ನು 1000 ರೂಪಾಯಿಯ ಇನ್ ಸ್ಟಲೇಷನ್ ಶುಲ್ಕದ ಮನ್ನಾದ ಮೂಲಕ ಪಡೆಯುತ್ತಾರೆ. ಇದು ಸೀಮಿತ ಅವಧಿಯ ಕೊಡುಗೆ ಆಗಿದ್ದು, ಜುಲೈ 26ರಿಂದ ಆಗಸ್ಟ್ 15ನೇ ತಾರೀಕಿನ ಮಧ್ಯೆ ಇರುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read