HomeLatest Newsನಾಳೆ ಭಾರತ - ಐರ್ಲೆಂಡ್ ನಡುವಣ ಅಂತಿಮ ಟಿ 20 ಪಂದ್ಯ; ಕ್ಲೀನ್ ಸ್ವೀಪ್ ಮಾಡುವ...

ನಾಳೆ ಭಾರತ – ಐರ್ಲೆಂಡ್ ನಡುವಣ ಅಂತಿಮ ಟಿ 20 ಪಂದ್ಯ; ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿ ಬೂಮ್ರಾ ಪಡೆ

India vs Ireland, 2nd T20 Highlights: India defeat Ireland by 33 runs, take unassailable 2-0 lead in 3-match series | Cricket News - The Indian Express

ನಾಳೆ ಭಾರತ ಹಾಗೂ ಐರ್ಲೆಂಡ್ ನಡುವಣ  ಟಿ ಟ್ವೆಂಟಿ ಸರಣಿಯ ಮೂರನೇ ಪಂದ್ಯ ಡಬ್ಲಿನ್ ನಲ್ಲಿ ನಡೆಯಲಿದ್ದು, ಭಾರತ ತಂಡ ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿದೆ.

ಮೂರು ಪಂದ್ಯಗಳಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಸರಣಿ ಕೈ ವಶ ಮಾಡಿಕೊಂಡಿರುವ ಭಾರತ ತಂಡದ ಬೌಲಿಂಗ್ ದಾಳಿಗೆ ಐರ್ಲೆಂಡ್ ತತ್ತರಿಸಿ ಹೋಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್, ಶಿವಂ ದುಬೆ, ಹಾಗೂ ರಿಂಕು ಸಿಂಗ್ ಭರ್ಜರಿ ಪ್ರದರ್ಶನ ತೋರಿದ್ದು, ಐಪಿಎಲ್ ನಂತೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲೂ ಯುವ ಪ್ರತಿಭೆಗಳು ಮಿಂಚುತ್ತಿದ್ದಾರೆ.

ಮೊದಲ ಪಂದ್ಯದಲ್ಲಿ ರಿಂಕು ಸಿಂಗ್ ಗೆ ಬ್ಯಾಟಿಂಗ್ ಸಿಗಲಿಲ್ಲ ಎಂದು ಬೇಸರಗೊಂಡಿದ್ದ ಅವರ ಅಭಿಮಾನಿಗಳಿಗೆ ಎರಡನೇ ಪಂದ್ಯ ಸಂತಸ ತಂದಿದೆ. ಮೂರನೇ ಪಂದ್ಯದಲ್ಲೂ ರಿಂಕು ಸಿಂಗ್ ಗೆ ಬೇಗ ಬ್ಯಾಟಿಂಗ್ ಸಿಗಲಿ ಎಂಬುದು ಅವರ ಅಭಿಮಾನಿಗಳ ಆಶಯವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular