ಡೆಹ್ರಾಡೂನ್‌ನ ಕುಟುಂಬದ 7 ಸದಸ್ಯರು ಹರಿಯಾಣದ ಪಂಚಕುಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೆಕ್ಟರ್ 27 ರ ಮನೆಯ ಹೊರಗೆ ನಿಲ್ಲಿಸಿದ್ದ ಕಾರ್ ನೊಳಗೆ ಶವಗಳು ಲಾಕ್ ಆಗಿರುವುದು ಪತ್ತೆಯಾಗಿದೆ.
ಕುಟುಂಬವು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿದ್ದರಿಂದ ಈ ತೀವ್ರ ಕ್ರಮ ಕೈಗೊಂಡಿದೆ. ಡೆಹ್ರಾಡೂನ್ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತಮ್ಮ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.
ಕಾರ್ಯಕ್ರಮ ಮುಗಿದ ನಂತರ ಕುಟುಂಬವು ಡೆಹ್ರಾಡೂನ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಭಾನುವಾರ ನಡೆದಿದೆ.
ವರದಿಗಳ ಪ್ರಕಾರ, ಕುಟುಂಬವನ್ನು ಮೊದಲು ಸ್ಥಳೀಯರು ನೋಡಿದರು. ಕಾರ್ ನೊಳಗೆ ಅವರು ಹೆಣಗಾಡುತ್ತಿರುವುದನ್ನು ನೋಡಿ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು.
ಪೊಲೀಸರು ಆಗಮಿಸಿದ ತಕ್ಷಣ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕುಟುಂಬ ಸದಸ್ಯರನ್ನು ರಕ್ಷಿಸಲು ಬಾಗಿಲು ಒಡೆದರು. ನಂತರ, ಅವರನ್ನು ಖಾಸಗಿ ಮತ್ತು ನಾಗರಿಕ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.
ಮೃತರನ್ನು 42 ವರ್ಷದ ಪ್ರವೀಣ್ ಮಿತ್ತಲ್, ಅವರ ಪೋಷಕರು, ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಮೃತಪಟ್ಟಿದ್ದಾರೆ.
ಆರಂಭಿಕ ತನಿಖೆಯ ಪ್ರಕಾರ, ಇದು ಆತ್ಮಹತ್ಯೆ ಪ್ರಕರಣದಂತೆ ಕಂಡುಬಂದಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ತಲುಪಿದೆ. ನಾವು ಅಪರಾಧ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ವಿಶ್ಲೇಷಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹಿಮಾದ್ರಿ ಕೌಶಿಕ್ ಹೇಳಿದ್ದಾರೆ.
ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಪಂಚಕುಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.