BREAKING : ‘ಧರ್ಮಸ್ಥಳದಲ್ಲಿ ಶವ ಹೂತಿಟ್ಟ’ ಕೇಸ್ : ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ಆರಂಭ.!

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ಆರಂಭವಾಗಿದೆ.

ಸೋಮವಾರ ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಗಳಿಗೆ ಆಗಮಿಸಿರುವ ಎಸ್ ಐ ಟಿ ಗುರುತು ಮಾಡಿರುವ ಸ್ಥಳಗಳನ್ನು ಅಗೆಯಲು ಕಾರ್ಮಿಕರನ್ನು ಕರೆಸಿದೆ. ಈಗಾಗಲೇ ಕಾರ್ಮಿಕರು ಹಾರೆ, ಪಿಕಾಸಿಯೊಂದಿಗೆ ನೆಲ ಅಗೆಯುವ ಪ್ರಕ್ರಿಯೆ ಆರಂಭಿಸಿದ್ದಾರೆ ಎನ್ನಲಾಗಿದೆ.

ನಿನ್ನೆ ಏನಾಗಿತ್ತು..?

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಶವಗಳನ್ನು ಹೂತು ಹಾಕಿರುವುದಾಗಿ ಹೇಳಲಾದ ಸ್ಥಳಗಳಲ್ಲಿ ಮಹಜರು ನಡೆಸಲಾಗಿತ್ತು. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ದೂರುದಾರ ಹೇಳಿದ್ದ ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾರೆ.

ಮುಖಕ್ಕೆ ಮುಸುಕು ಹಾಕಿದ್ದ ಸಾಕ್ಷಿ ದೂರುದಾರ ತೋರಿಸಿದ ಒಂದೊಂದು ಜಾಗದ ಜಿಪಿಎಸ್ ಗುರುತುಗಳನ್ನು ಎಸ್ಐಟಿ ಅಧಿಕಾರಿಗಳು ದಾಖಲಿಸಿಕೊಂಡು ಕೆಂಪು ರಿಬ್ಬನ್ ಕಟ್ಟಿದ್ದಾರೆ. ಪ್ರತಿ ಜಾಗವನ್ನು ಕೂಡ ನಿರ್ದಿಷ್ಟ ಸಂಖ್ಯೆಯ ಮೂಲಕ ಗುರುತು ಮಾಡಲಾಗಿದೆ. ವಿಧಿ ವಿಜ್ಞಾನ ತಜ್ಞರು, ಭದ್ರತಾ ಸಿಬ್ಬಂದಿ ಸಾಕ್ಷಿ ದೂರುದಾರನೊಂದಿಗೆ ಮುಂಡಾಜೆ ಮೀಸಲು ಅರಣ್ಯಕ್ಕೆ ಸೇರಿದ ಕಾಡಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಪಂಚನಾಮೆ ನಡೆಸಿ ಮಹಜರು ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read