HomeKarnatakaBREAKING NEWS: ಬಸ್ ಪಲ್ಟಿಯಾಗಿ ಬಿದ್ದು ದುರಂತ: 15 ಜನರಿಗೆ ಗಂಭೀರ ಗಾಯ

BREAKING NEWS: ಬಸ್ ಪಲ್ಟಿಯಾಗಿ ಬಿದ್ದು ದುರಂತ: 15 ಜನರಿಗೆ ಗಂಭೀರ ಗಾಯ

ರಾಮನಗರ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ.

ಅಪಘಾತದಲ್ಲಿ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕೆಲವರನ್ನು ಬೆಂಗಳೂರಿನ ದಯಾನಂದ ಆಸ್ಪತ್ರೆಗೆ ರವಾನಿಸಲಾಗಿದೆ.

ಚಾಲಕನ ಅತಿಯಾದ ವೇಗವೇ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಬೀಳಲು ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular