ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಪ್ರಯಾಣಿಕರ ಬಸ್ ಸೇತುವೆ ಮೇಲಿಂದ ಹಳ್ಳಕ್ಕೆ ಉರುಳಿ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅಣಜಿಗೆರೆ ಬಳಿ ನಡೆದಿದೆ.
ದಾವಣಗೆರೆಯಿಂದ ಅರಸೀಕೆರೆಯತ್ತ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಉರುಳಿ ಬಿದ್ದ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.