BIG NEWS: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ: ಓರ್ವ ಮಹಿಳೆ ಸಾವು; ಹಲವರ ಸ್ಥಿತಿ ಗಂಭೀರ

ಭೋಪಾಲ್: ಕರಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಗುಜರಾತ್ ನಿಂದ ಮಧ್ಯಪ್ರದೇಶಕ್ಕೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಕಾರ್ಮಿಕರನ್ನು ಕರ್ರೆತರಲಾಗುತ್ತಿತ್ತು. ಈ ವೇಳೆ ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿ ಅಭಯಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 28 ವರ್ಷದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 24 ಜನರು ಗಾಯಗೊಂಡಿದ್ದಾರೆ.

ಸುನೈರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅತಿಯಾದ ವೇಗದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಲ್ಲಿ ಪಲ್ಟಿಯಾಗಿ ಬಿದ್ದು ದುರಂತ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read