HomeIndiaBIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಮೂವರು ಯಾತ್ರಾರ್ಥಿಗಳು ಸಾವು

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಮೂವರು ಯಾತ್ರಾರ್ಥಿಗಳು ಸಾವು

ಅಹಮದಾಬಾದ್: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ಖೇಡಾ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದ್ದು, ಬಸ್ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ, 25 ಜನರು ಗಯಗೊಂಡಿದ್ದಾರೆ. ಬಸ್ ಅಂಬಾಜಿ ದೇವಸ್ಥಾನದಿಂದ ಹಿಂದಿರುಗುತ್ತಿದ್ದಾಗ ಈ ಈ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಬದಿ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ನಲ್ಲಿ ಸುಮಾರು 50 ಜನರಿದ್ದರು. ಎಲ್ಲರೂ ಖೇಡಾದಿಂದ ಕತ್ಲಾಲ್ ಗೆ ತೆರಳುತ್ತಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular