ಕಾರವಾರ: ಸಾರಿಗೆ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ವಡ್ಡಿ ಘಾಟ್ ಬಳಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದಿದೆ.
ವಡ್ಡಿ ಘಾಟ್ ಬಳಿ ಅಪಾಯಕಾರಿ ತಿರುವಿನಲ್ಲಿ ಬಸ್ ಕಂದಕಕ್ಕೆ ಉರುಳಿ ಮೂರು ಬಾರಿ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಬಸ್ ಚಾಲಕ ಸೇರಿ 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಥಳೀಯರು ಪ್ರಯಾಣಿಕರನ್ನು ಮೇಲಕೆತ್ತಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಅಂಕೋಲಾ ಹಾಗೂ ಕುಮಟಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.