ಕಾರವಾರ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸುಳೆಮುರ್ಕಿ ಕ್ರಾಸ್ ನಲ್ಲಿ ನಡೆದಿದೆ.
ಹಾನಗಲ್ ನಿಂದ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಸಿದ್ದಾಪುರ ಮಾರ್ಗವಾಗಿ ಹೊನ್ನಾವರದತ್ತ ತೆರಳುತ್ತಿತ್ತು. ಘಟ್ಟ ಪ್ರದೇಶದ ಇಳಿಜಾರು ತಿರುವಿನಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ.
ಅಪಘಾತದಲ್ಲಿ ಬಸ್ ಚಾಲಕ, ಕಂಡಕ್ಟರ್ ಸೇರಿದಂತೆ 25 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
