HomeLatest NewsBIG NEWS: ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಅಪಘಾತ: ಮಹಿಳೆ ಸ್ಥಳದಲ್ಲೇ ದುರ್ಮರಣ

BIG NEWS: ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಅಪಘಾತ: ಮಹಿಳೆ ಸ್ಥಳದಲ್ಲೇ ದುರ್ಮರಣ

ಕೋಲಾರ: ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನಿಳ್ಳಕೋಟೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಆಂಧ್ರ ಮೂಲದ ೫೮ ವರ್ಷದ ಅನಿತಾ ಮೃತ ಮಹಿಳೆ. ಆಂಧ್ರದ ಬಂಧ್ವೇಲ್ ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬದ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಮದನಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular