BREAKING: ಬ್ರೇಕ್ ಫೇಲ್ ಆಗಿ ರಸ್ತೆ ಬದಿ ಹಳ್ಳಕ್ಕೆ ಬಿದ್ದ BMTC ಬಸ್

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ರಸ್ತೆ ಬದಿ ಹಳ್ಳಕ್ಕೆ ಬಿದ್ದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹರಪನಹಳ್ಳಿಯಲ್ಲಿ ನಡೆದಿದೆ.

ಹರಪನಹಳ್ಳಿ ಪೊಲೀಸ್ ಕೆರೆ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್ ನಿಂದ ಆನೇಕಲ್ ಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಏಕಾಏಕಿ ಬ್ರೇಕ್ ಫೇಲ್ ಆಗಿ, ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಬಿದ್ದಿದೆ.

ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read