HomeLatest NewsBREAKING: ಬ್ರೇಕ್ ಫೇಲ್ ಆಗಿ ರಸ್ತೆ ಬದಿ ಹಳ್ಳಕ್ಕೆ ಬಿದ್ದ BMTC ಬಸ್

BREAKING: ಬ್ರೇಕ್ ಫೇಲ್ ಆಗಿ ರಸ್ತೆ ಬದಿ ಹಳ್ಳಕ್ಕೆ ಬಿದ್ದ BMTC ಬಸ್

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ರಸ್ತೆ ಬದಿ ಹಳ್ಳಕ್ಕೆ ಬಿದ್ದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹರಪನಹಳ್ಳಿಯಲ್ಲಿ ನಡೆದಿದೆ.

ಹರಪನಹಳ್ಳಿ ಪೊಲೀಸ್ ಕೆರೆ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್ ನಿಂದ ಆನೇಕಲ್ ಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಏಕಾಏಕಿ ಬ್ರೇಕ್ ಫೇಲ್ ಆಗಿ, ಚಾಲಕನ ನಿಯಂತ್ರಣ ಕಳೆದುಕೊಂಡು ಹಳ್ಳಕ್ಕೆ ಬಿದ್ದಿದೆ.

ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular