HomeKarnatakaBREAKING NEWS: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ

BREAKING NEWS: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಡೆದಿದೆ.

ತಡೆಗೋಡೆಗೆ ಬಸ್ ಡಿಕ್ಕಿಯಾದ ರಭಸಕ್ಕೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸೀಫ್ (45) ಮೃತ ಚಾಲಕ. ಬಸ್ ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿತ್ತು. ಈ ವೇಳೆ ಈ ದುರಂತ ಸಂಭವಿಸಿದೆ.

ಸದ್ಯ ಬಸ್ ನಲ್ಲಿರುವ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular