ಶ್ರೀನಗರ: ಜಮ್ಮು-ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸಾಂಬಾ ಜಿಲ್ಲೆಯ ಜಟ್ವಾಲ್ ಪ್ರದೇಶದಲ್ಲಿ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಸ್ ನಲ್ಲಿ 20 ಜನರು ಇದ್ದರು. 40 ಜನರು ಗಾಯಗೊಂಡಿದ್ದಾರೆ. ಬಸ್ ಉತ್ತರ ಪ್ರದೇಶದಿಂದ ಮಾತಾ ವೈಷ್ಣೋದೇವಿ ದರ್ಶನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಬರುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.