HomeKarnatakaBREAKING: ಎರಡು ಬಸ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಓರ್ವ ಸಾವು, 15 ಮಂದಿಗೆ ಗಾಯ

BREAKING: ಎರಡು ಬಸ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಓರ್ವ ಸಾವು, 15 ಮಂದಿಗೆ ಗಾಯ

ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಗುಂಟಪಲ್ಲಿ ಕ್ರಾಸ್ ಬಳಿ ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶದ ಮದನಪಲ್ಲಿಯ ಗಂಗಾಧರ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸಮೀಪ ತಡರಾತ್ರಿ ಅಪಘಾತ ಸಂಭವಿಸಿದೆ.

ಗುಂಟಪಲ್ಲಿ ಕ್ರಾಸ್ ಬಳಿ ಓವರ್ ಟೇಕ್ ಮಾಡಲು ಹೋಗಿ ಸುವರ್ಣಮುಖಿ ಟ್ರಾವೆಲ್ಸ್ ಮತ್ತು ಎ.ಆರ್. ಟ್ರಾವೆಲ್ಸ್ ಬಸ್ ಗಳ ನಡುವೆ ಡಿಕ್ಕಿ ಆಗಿದೆ. ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದು, 15 ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಂಧ್ರಪ್ರದೇಶದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular