HomeKarnatakaBREAKING NEWS: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ

BREAKING NEWS: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ

ಕೊಡಗು: ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಜೋಡುಪಾಲ ಬಳಿ ನಡೆದಿದೆ.

ಬೆಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಅಪಘತದಲ್ಲಿ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿದೆ. ಮಡಿಕೇರಿ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular